ಬೆಂಗಳೂರು:- ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಇಂದು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ರು.
Advertisement
ಲೋಕಾಯುಕ್ತ ನೊಟೀಸ್ ಹಿನ್ನೆಲೆಯಲ್ಲಿ ದೆಹಲಿಯಿಂದ ಸಂಜೆ ಬೆಂಗಳೂರಿಗೆ ಬಂದಿಳಿದ ಕೇಂದ್ರ ಸಚಿವರು, ನೇರವಾಗಿ ಲೋಕಾಯುಕ್ತ ಕಚೇರಿಗೆ ತೆರಳಿ 1 ಗಂಟೆ ವಿಚಾರಣೆ ಎದುರಿಸಿದ್ರು.
ವಿಚಾರಣೆ ಬಳಿಕ ಮಾತನಾಡಿದ HDK, ನಾನು ಅಧಿಕಾರದಲ್ಲಿದ್ದಾಗ ಯಾವುದೇ ತಪ್ಪುಮಾಡಿಲ್ಲ. ಸ್ವಯಂಪ್ರೇರಣೆಯಿಂದಲೇ ವಿಚಾರಣೆಗೆ ಹಾಜರಾಗಿದ್ದೇನೆ. ಮತ್ತೆ ವಿಚಾರಣೆಗೆ ಕರೆದಿಲ್ಲ ಎಂದರು.