ಉಡುಪಿ:– ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಇಂದು ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಭೇಟಿ ವೇಳೆ ಕಡೆಗೋಲು ಶ್ರೀಕೃಷ್ಣ ದೇವರ ದರ್ಶನ ಪಡೆದು, ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಇದೇ ವೇಳೆ ಪರ್ಯಾಯ ಪುತ್ತಿಗೆ ಮಠದಿಂದ ಪ್ರಹ್ಲಾದ್ ಜೋಶಿಗೆ ಗೌರವ ಸಮರ್ಪಿಸಲಾಯಿತು. ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ಭೇಟಿಯಾದರು. ಮಠದಲ್ಲೇ ಅನ್ನಪ್ರಸಾದ ಸ್ವೀಕಾರಿಸಿದರು.
ರನ್ಯಾ ಗೋಲ್ಡ್ ಸ್ಮಗ್ಲಿಂಗ್ ವಿಚಾರವಾಗಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರದ ಅಧಿಕಾರಿಗಳು ಆರೋಪಿಗೆ ಎಸ್ಕಾರ್ಟ್ ಕೊಟ್ಟಿದ್ದಾರೆ. ಪ್ರೋಟೊಕಾಲ್ ವ್ಯವಸ್ಥೆ ಮಾಡಿ ಚೆಕ್ಕಿಂಗ್ ಇಲ್ಲದೆ ಬಿಟ್ಟಿದ್ದಾರೆ. ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರು ಕೇಳಿಬರುತ್ತಿದೆ. ರಾಜ್ಯ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ರಾಜ್ಯ ಸರ್ಕಾರದ ಮಂತ್ರಿಗಳ ಪಾತ್ರ ಇದೆ ಎನ್ನಲಾಗುತ್ತಿದೆ.
ಗೃಹ ಸಚಿವ ಪರಮೇಶ್ವರ್ ಮೊದಲು ಸಿಐಡಿ ತನಿಖೆಗೆ ಕೊಟ್ಟರು. ರಾಮಚಂದ್ರ ರಾವ್ ಡಿಜಿಐ ಆಗಿರುವುದರಿಂದ ಅಡಿಷನಲ್ ಚೀಫ್ ಸೆಕ್ರೆಟರಿಗೆ ಕೊಟ್ಟಿದ್ದೇವೆ ಎಂದರು. ಕಸ್ಟಮ್ ತಪ್ಪಿಸಿ ಪ್ರೋಟೊಕಾಲ್ ಮೂಲಕ ಹೇಗೆ ಕರೆತರಲಾಯಿತು? ಭಾರತ ಸರ್ಕಾರದ ಇಂಟೆಲಿಜೆನ್ಸ್ ಬರುವವರೆಗೆ ನಿಮ್ಮ ಇಂಟೆಲಿಜೆನ್ಸ್ ಏನು ಮಾಡುತ್ತಿತ್ತು? ಈ ಥರದ ಹಲವಾರು ಪ್ರಶ್ನೆಗಳಿವೆ. ಈ ಥರದ ದುಡ್ಡು ಬಂಗಾರಗಳು ಸಮಾಜ ವಿದ್ರೋಹಿ ಕೃತ್ಯಕ್ಕೆ ಬಳಕೆಯಾಗುತ್ತದೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಇರಬೇಕು. ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.