ಉಡುಪಿ: ಮಲೆಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಕುಟುಂಬ ಹಾಗೂ ಸ್ನೇಹಿತರೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೃಷ್ಣಮಠಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಠದ ದಿವಾನರು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸುರೇಶ್ ಗೋಪಿ ಅವರು ಪರಂಪರೆಯಂತೆ ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿಭಾವ ವ್ಯಕ್ತಪಡಿಸಿದರು.
ಈ ವೇಳೆ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳನ್ನು ಸಚಿವರು ಭೇಟಿಯಾಗಿ ಆಶೀರ್ವಾದ ಪಡೆದರು.
ತೀರ್ಥರ ಪರ್ಯಾಯ ಸಮಾಪ್ತಿ ಸಂದರ್ಭದಲ್ಲಿ ಈ ಭೇಟಿ ನಡೆದಿದ್ದು, ಮಠದ ಪರವಾಗಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಕೇಂದ್ರ ಸಚಿವ ಸುರೇಶ್ ಗೋಪಿ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.



