ವಿಜಯಸಾಕ್ಷಿ ಸುದ್ದಿ, ಗದಗ: ಬಿಷಪ್ ಕಾಟನ್ ವುಮೆನ್ಸ್ ಕ್ರಿಶ್ಚಿಯನ್ ಕಾನೂನು ಕಾಲೇಜು, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾದ ಯೋಗ ಸ್ಪರ್ಧೆಯಲ್ಲಿ ನಗರದ ಹುಲಕೋಟಿ ಸಹಕಾರ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿನಿ ಸಂಗೀತಾ ನಾಗಲಿಂಗನವರ್ ದ್ವಿತೀಯ ಸ್ಥಾನ ಗಿಟ್ಟಿ, 2025-26ನೇ ಸಾಲಿನ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಎಚ್.ಸಿ.ಇ.ಎಸ್. ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪಲ್ಲವಿ ಬುಯ್ಯಾರ, ಕ್ರೀಡಾ ವಿಭಾಗದ ಮುಖ್ಯಸ್ಥರಾದ ಪ್ರೊ. ವಿಶ್ವನಾಥ್ ಹಿರೇಮಠ ಹಾಗೂ ಸರ್ವ ಸಿಬ್ಬಂದಿ ವೃಂದದವರು ಹಾರ್ದಿಕ ಅಭಿನಂದನೆಗಳನ್ನು ತಿಳಿಸಿದ್ದಾರೆ.



