ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕರ್ನಾಟಕ ವಿಶ್ವವಿದ್ಯಾಲಯದ ರೋಪ್ ಸ್ಕಿಪ್ಪಿಂಗ್‌ನಲ್ಲಿ ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ ಕಳಕಪ್ಪ ಚವಡಿ ಕರ್ನಾಟಕ ವಿಶ್ವವಿದ್ಯಾಲಯದ ಬ್ಲ್ಯೂ ಆಗಿ ಆಯ್ಕೆಯಾಗಿದ್ದಾನೆ ಎಂದು ಪ್ರಾಚಾರ್ಯ ಎಸ್.ಜಿ. ಕೇಶಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಸೂಕ್ತ ಮಾರ್ಗದರ್ಶನ ನೀಡಿದ ಕಾಲೇಜಿನ ದೈಹಿಕ ಪ್ರಾಧ್ಯಾಪಕ ಗೌಡರ ಅವರನ್ನು ಮತ್ತು ವಿದ್ಯಾರ್ಥಿಯನ್ನು ಅಭಿನಂದಿಸುವುದಾಗಿ ಕೇಶಣ್ಣವರ ತಿಳಿಸಿದ್ದಾರೆ. ಕಳಕಪ್ಪ ಚವಡಿ ಈಚೆಗೆ ರಾಜಸ್ಥಾನದ ಮಾಧವ ವಿಶ್ವವಿದ್ಯಾಲಯದಲ್ಲಿ ನಡೆದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಎಲ್ಲರ ಮನವನ್ನು ಗೆದ್ದಿದ್ದಾನೆ. ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ, ಆಡಳಿತಾಧಿಕಾರಿ ಎನ್.ಆರ್. ಗೌಡರ, ಸಿಬ್ಬಂದಿ ವರ್ಗದವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.