ಧರ್ಮಸ್ಥಳ ಅಸಹಜ ಸಾವು ಪ್ರಕರಣ: SITಯಿಂದ ತಲೆಬುರುಡೆ ತೆಗೆದ ಜಾಗದಲ್ಲಿ ಸ್ಥಳ ಮಹಜರು!

0
Spread the love

ಮಂಗಳೂರು: ರಾಜ್ಯ, ದೇಶದೆಲ್ಲೆಡೆ ಸುದ್ದಿಯಾಗಿರುವ ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣದ ಎಸ್‌ಐಟಿ ತನಿಖೆ ಚುರುಕುಗೊಂಡಿದೆ. ಧರ್ಮಸ್ಥಳದಲ್ಲಿ ಈಗಾಗಲೇ ತನಿಖೆ ಆರಂಭಿಸಿರುವ ಎಸ್ ಐಟಿ ತಂಡವು ಇದೀಗ ಫೊರೆನ್ಸಿಕ್ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆ, ಅರಣ್ಯ ಇಲಾಖೆ ಮತ್ತು ಸರ್ವೇ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸ್ಥಳ ಮಹಜರು ಆರಂಭಿಸಿದ್ದಾರೆ.

Advertisement

ಎಸ್‌ಐಟಿ ಎಸ್ಪಿ ಸಿ.ಎ.ಸೈಮನ್ ಅವರ ನೇತೃತ್ವದಲ್ಲಿ ದೂರುದಾರನನ್ನು ಅಧಿಕಾರಿಗಳು ಸ್ಥಳಕ್ಕೆ ಕರೆತಂದಿದ್ದು, ಪೊಲೀಸ್ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು ಕಾರ್ಯ ಆರಂಭವಾಗಿದೆ. ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್, ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಸೇರಿ ಇನ್ನಿತರರ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಯುತ್ತಿದೆ.

ಕಳೆದ ಎರಡು ದಿನಗಳಿಂದ ಎಸ್‌ಐಟಿ ತಂಡ ದೂರುದಾರನ ವಿಚಾರಣೆ ನಡೆಸಿದ್ದು, ಸುಮಾರು 14 ಗಂಟೆಗಳ ಕಾಲ ವಿಚಾರಣೆ ನಡೆಸಿ ಹಲವು ಮಹತ್ವದ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಇಂದಿನಿಂದ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಿಂದ ಕಾರ್ಯಾಚರಣೆ ನಡೆಸಲಿದ್ದು. ದೂರುದಾರನ ಹೇಳಿಕೆ ಆಧಾರದ ಮೇಲೆ ಪ್ರಣವ್ ಮೊಹಂತಿ ತಂಡ ತನಿಖೆ ಚುರುಕುಗೊಳಿಸಲಿದ್ದಾರೆ.


Spread the love

LEAVE A REPLY

Please enter your comment!
Please enter your name here