ರಾಯಚೂರು:- ಜೊತೆಯಲ್ಲಿ ಮಲಗಲು ಸ್ಪಂದಿಸದ ಸೊಸೆಯನ್ನೇ ಮಾವ ಬರ್ಬರವಾಗಿ ಹತ್ಯೆಗೈದ ಘಟನೆ ಜರುಗಿದೆ.
Advertisement
27 ವರ್ಷದ ದುಳ್ಳಮ್ಮ ಮೃತ ಮಹಿಳೆ. ಇದಕ್ಕೂ ಮುಂದೆ 2-3 ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಗ್ರಾಮದ ಹಿರಿಯರು, ಕುಟುಂಬಸ್ಥರು ಆರೋಪಿ ರಾಮಲಿಂಗಯ್ಯಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಈ ಬಾರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಸೊಸೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದ. ಈ ವೇಳೆ ಸೊಸೆ ನಿರಾಕರಿಸಿದ್ದು, ಸಲಾಕೆಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಘಟನೆ ಬಳಿಕ ಆರೋಪಿ ಗ್ರಾಮದಿಂದ ಪರಾರಿಯಾಗಿದ್ದಾನೆ. ಸದ್ಯ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.