ಮಡಿಕೇರಿ:- ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿಯ ಹಳ್ಳಿಗಟ್ಟು ಗ್ರಾಮದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ಮೇಲೆ ಕಾಡಾನೆ ದಾಳಿ ನಡೆದಿರುವ ಘಟನೆ ಜರುಗಿದೆ.
Advertisement
ಗಾಯಗೊಂಡ ಸಹೋದರರನ್ನು ಮೊಹಮ್ಮದ್ ಫೈಜನ್ ಹಾಗೂ ಅಬುರ್ ಉವೈಸ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಗ್ಗಿನ ಜಾವ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. ಈ ಸಂದರ್ಭ ಸಹೋದರರು ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿದೆ. ಇಬ್ಬರಿಗೂ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.
ಇನ್ನೂ ಕಳೆದ 2 ದಶಕಗಳಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ನಿರಂತರವಾಗಿ ಹೆಚ್ಚುತ್ತಿದೆ. ಅದರಲ್ಲೂ ನಾಗರಹೊಳೆ ಅರಣ್ಯದ ಅಂಚಿನ ದಕ್ಷಿಣ ಕೊಡಗಿನ ಗ್ರಾಮಗಳು ಕಾಡಾನೆ ಹಾವಳಿಯಿಂದ ನಲುಗಿಹೋಗಿವೆ.