ಹುಬ್ಬಳ್ಳಿ:- ಸಿಲಿಂಡರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಜರುಗಿದೆ.
Advertisement
ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿದ್ದ ಗಂಗಮ್ಮ ಮೃತರು. ಕಳೆದ ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65% ಸುಟ್ಟ ಗಾಯಗಳಾಗಿದ್ದವು. ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಉಳಿದ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಹುಬ್ಬಳ್ಳಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.