ವಿಜಯಸಾಕ್ಷಿ ಸುದ್ದಿ, ಧಾರವಾಡ : ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನದಡಿ, ಶುಕ್ರವಾರ ಬೆಳಿಗ್ಗೆ ಕನ್ನಡದ ಮೊದಲ ಶಾಸನವಾದ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದ ಆವರಣದಲ್ಲಿ ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಆಲೂರು ವೆಂಕಟರಾವ್ ಟ್ರಸ್ಟ್ ಅಧ್ಯಕ್ಷ ಪ್ರೊ. ಪ್ರಮೋದ ಗಾಯಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಡಾ. ಎಂ.ಎಂ. ಕಲಬುರ್ಗಿ ಟ್ರಸ್ಟ್ ಅಧ್ಯಕ್ಷ ಪ್ರೊ. ವೀರಣ್ಣ ರಾಜೂರ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಟ್ರಸ್ಟ್ ಸದಸ್ಯ ದೀಪಕ ಆಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿ ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.