ವಿಜಯಸಾಕ್ಷಿ ಸುದ್ದಿ, ಗದಗ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಶುಕ್ರವಾರ ಗದಗ ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ವೀರನಾರಾಯಣನ ದರ್ಶನ ಪಡೆದರು.
ದೇವಸ್ಥಾನಕ್ಕೆ ಆಗಮಿಸಿದ ನ್ಯಾಯಮೂರ್ತಿ ಫಣೀಂದ್ರ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ವೀರನಾರಾಯಣ ದೇವಸ್ಥಾನದ ಇತಿಹಾಸ, ಪರಂಪರೆ ಹಾಗೂ ಧಾರ್ಮಿಕ ಮಹತ್ವದ ಕುರಿತು ಅವರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು ಹಾಗೂ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ್, ಸುನೀಲಕುಮಾರ್ ಆರ್., ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ, ಉಪಾಧೀಕ್ಷಕ ಲೋಕೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್ ಉಪಸ್ಥಿತರಿದ್ದರು.



