HomeGadag Newsಉತ್ತಮ ಚಿಕಿತ್ಸೆಗೆ ಆದ್ಯತೆ ನೀಡಿ : ಕೆ.ಎನ್. ಫಣೀಂದ್ರ

ಉತ್ತಮ ಚಿಕಿತ್ಸೆಗೆ ಆದ್ಯತೆ ನೀಡಿ : ಕೆ.ಎನ್. ಫಣೀಂದ್ರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ರವಿವಾರ ನಗರದ ಜಿಲ್ಲಾ ಆಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.

ಸಾಮಾನ್ಯ ಮಹಿಳೆಯರ ಹಾಗೂ ಪುರುಷರ ವಾರ್ಡ್ಗೆ ಭೇಟಿ ನೀಡಿ, ಒಳರೋಗಿಗಳ ಆರೋಗ್ಯ ವಿಚಾರಿಸಿದರು. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಹಾಗೂ ಔಷಧಿ ಪಡೆಯಲು ಆಸ್ಪತ್ರೆ ನೌಕರರು ಹಣ ಪಡೆಯುತ್ತಾರೆಯೇ ಎಂಬುದನ್ನು ಚಿಕಿತ್ಸೆಗೆ ದಾಖಲಾದ ಒಳರೋಗಿಗಳಲ್ಲಿ ವಿಚಾರಿಸಿದರು.

ಈ ವೇಳೆ ಚಿಕಿತ್ಸೆಗೆ ಆಗಮಿಸಿದ ರೋಗಿಯ ಸಂಬಂಧಿಕನೊಬ್ಬ ಮಾತನಾಡಿ, ಆಸ್ಪತ್ರೆಗೆ ದಾಖಲಾಗಲು ಆಗಮಿಸುವ ರೋಗಿಗಳು ಮೇಲ್ಮಹಡಿಗೆ ಆಗಮಿಸಲು ಸಮಸ್ಯೆಯಾಗುತ್ತಿದೆ. ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳ ಸಂಖ್ಯೆ ಅಧಿಕವಾಗಿದ್ದು, ವೀಲ್‌ಚೇರ್‌ಗಳ ಸಂಖ್ಯೆಗಳನ್ನು ಜಾಸ್ತಿ ಮಾಡಲು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಉಪಲೋಕಾಯುಕ್ತ ಕೆ.ಎನ್. ಫಣಿಂದ್ರ ಅವರು, ತಕ್ಷಣ ಆಸ್ಪತ್ರೆಯ ಮುಖ್ಯಸ್ಥರು ಈ ಬಗ್ಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.

ಆಸ್ಪತ್ರೆಯ ಕೆಲವು ಶೌಚಾಲಯಗಳ ನಿರ್ವಹಣೆ ಕಳಪೆಯಾಗಿದ್ದು, ಸರಿಯಾಗಿ ನಿರ್ವಹಿಸಬೇಕು ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆ ಹಾಗೂ ಉತ್ತಮ ಚಿಕಿತ್ಸೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಕರ್ನಾಟಕ ಲೋಕಾಯುಕ್ತ ಸಂಪನ್ಮೂಲ ಅಧಿಕಾರಿ ಪ್ರಕಾಶ ಎಲ್.ನಾಡಗೇರ, ಕರ್ನಾಟಕ ಲೋಕಾಯುಕ್ತ ಉಪನಿಬಂಧಕ ಅಮರನಾರಾಯಣ ಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ, ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ್ ಅಧೀಕ್ಷಕ ಸತೀಶ ಚಿಟಗುಬ್ಬಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಉಪ ವಿಭಾಗಾಧಿಕಾರಿ ಡಾ. ವೆಂಕಟೇಶ ನಾಯ್ಕ, ಡಿಎಚ್‌ಒ ಡಾ. ಎಸ್.ಎಸ್. ನೀಲಗುಂದ ಉಪಸ್ಥಿತರಿದ್ದರು.

ಲೋಕಾಯುಕ್ತ ತಂಡದ ಇನ್ನಿತರ ಸದ್ಯಸರು ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯ ಕುರಿತು ಉಪಲೋಕಾಯುಕ್ತರಿಗೆ ವರದಿ ನೀಡಿದರು. ಅವರ ವರದಿ ಆಧಾರದ ಮೇಲೆ ಜಿಮ್ಸ್ ನಿರ್ದೇಶಕ ಬಸವರಾಜ್ ಬೋಮ್ಮನಹಳ್ಳಿ ಅವರಿಗೆ ಆಸ್ಪತ್ರೆಯ ಮೆಡಿಕಲ್ ತ್ಯಾಜ್ಯ ನಿರ್ವಹಣೆಯನ್ನು ಸರಿಯಾಗಿ ನಿರ್ವಹಿಸಬೇಕು. ವಾರ್ಡ್ವಾರು ಕಸ ನಿರ್ವಹಣೆ ಹಾಗೂ ಮೆಡಿಕಲ್ ತ್ಯಾಜ್ಯವನ್ನು ಪ್ರತೇಕವಾಗಿ ವಿಲೇವಾರಿ ಮಾಡಲು ನಿರ್ದೇಶಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!