ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬಹುನಿರೀಕ್ಷಿತ ಯುಐ ಸಿನಿಮಾ ರಿಲೀಸ್ ಆಗಿದೆ. ಬರೋಬ್ಬರಿ 9 ವರ್ಷಗಳ ಬಳಿಕ ಉಪ್ಪಿ ಥಿಯೇಟರ್ ಗೆ ಎಂಟ್ರಿಕೊಡ್ತಿದ್ದು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಯುಐ ಸಿನಿಮಾ ರಿಲೀಸ್ ಬೆನ್ನಲ್ಲೇ ಪ್ರೇಕ್ಷಕರಿಗೆ ಉಪೇಂದ್ರ ಸವಾಲೆಸಿದಿದ್ದಾರೆ.
ನಟ-ನಿರ್ದೇಶಕ ಉಪೇಂದ್ರ ತಮ್ಮ ಸಿನಿಮಾ ಬಿಡುಗಡೆ ಬೆನ್ನಲ್ಲೇ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಪ್ಲ್ಯಾಟ್ಫಾರ್ಮ್ಗಳಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಅದರಲ್ಲಿ, ”ಕಾತರದಿಂದ ಕಾಯುತ್ತಿದ್ದೇನೆ.. U I ಚಿತ್ರದ ಎಷ್ಟು ಸೀನ್ಗಳನ್ನು ಡೀಕೋಡ್ ಮಾಡುತ್ತೀರಾ ಮತ್ತು ಕೊನೆಯ ಶಾಟ್ ಡಿಕೋಡ್ ಮಾಡಲು ಎಷ್ಟು ಸಮಯ ತೆಗೆದು ಕೊಳ್ಳುತ್ತೀರಾ ಎಂದು…..” ಬರೆದುಕೊಂಡಿದ್ದಾರೆ.
ಉಪೇಂದ್ರ ಅವರ ಸಿನಿಮಾಗಳು ವೀಕ್ಷಕರ ತಲೆಗೆ ಕೆಲಸ ಕೊಡುತ್ತೆ ಅನ್ನೋ ಮಾತು ಈಗಾಗಲೇ ಸಾಬೀತು ಮಾಡಿದೆ. ಸದ್ಯ ನಟನ ಹಂಚಿಕೊಂಡಿರುವ ಪೋಸ್ಟ್ ಸಿನಿಪ್ರಿಯರ ಕುತೂಹಲವನ್ನು ಮತ್ತಷ್ಟು ಕೆರಳಿಸಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಇಂದು ಬೆಳಗ್ಗೆ 6:30ರಿಂದಲೇ ಚಿತ್ರದ ಪ್ರದರ್ಶನ ಶುರುವಾಗಿದೆ. ‘ಯುಐ’ ಚಿತ್ರ ನೋಡಿ ಫ್ಯೂಚರ್ ಫಿಲ್ಮ್, ಮತ್ತೊಮ್ಮೆ ಸಿನಿಮಾ ನೋಡಿದ್ರೆನೇ ಅರ್ಥವಾಗೋದು ಎಂದು ಪ್ರೇಕ್ಷಕರಿಂದ ರೆಸ್ಪಾನ್ಸ್ ಬಂದಿದೆ. ಎಂದಿಗೂ ಕಾಯಕವೇ ಕೈಲಾಸ, ಕೆಲಸ ಮಾಡಿ ಅಂತ ಹೇಳಿದ್ದಾರೆ. ಜೀವನದ ಬಗ್ಗೆ ಫೋಕಸ್ ಮಾಡಿ ಅನ್ನುವ ಸಂದೇಶ ಜನರಿಗೆ ಯುಐ ಸಿನಿಮಾದ ಮೂಲಕ ಉಪೇಂದ್ರ ನೀಡಿದ್ದಾರೆ.