ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಸಹಜವಾಗಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಸಹಜವಾಗಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿ ಬಾರಿಯೂ ಈ ಭದ್ರತೆ ಒದಗಿಸಲಾಗುತ್ತದೆ.
ಕೇಂದ್ರ ಸರ್ಕಾರ ನೀಡುವ ಸೂಚನೆ ಹಾಗೂ ನಮ್ಮದೇ ಗುಪ್ತಚರ ಮಾಹಿತಿ ಆಧಾರದಲ್ಲಿ ಸಹಜವಾಗಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಎಲ್ಲಾ ಜಿಲ್ಲೆಗಳಿಗೂ ಸೂಚನೆ ನೀಡಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಪ್ರತಿಬಾರಿ ಸ್ವಾತಂತ್ರ್ಯ ದಿನಾಚರಣೆಯ ಮುಂಚಿತವಾಗಿ ಹಾಗೂ ನಂತರದ ಎರಡು ದಿನ ಕಟ್ಟೆಚ್ಚರ ವಹಿಸಲಾಗಿರುತ್ತದೆ ಎಂದು ತಿಳಿಸಿದರು.
ಇನ್ನು ಇದೇ ವೇಳೆ ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಸ್ಕಾರ್ಟ್ ನೀಡದಿರುವ ಆರೋಪದ ಕುರಿತು ಮಾತನಾಡಿ, “ಅವರಿಗೆ ಏನು ಕೊಡಬೇಕು ಕೊಡ್ತಾರೆ. ಡಿಪಿಆರ್ ನವರು ಪ್ರೋಟೋ ಕಾಲ್ ಪ್ರಕಾರ ನೀಡ್ತಾರೆ. ನನಗೆ, ನಾರಾಯಣಸ್ವಾಮಿಗೆ ಪ್ರತ್ಯೇಕ ನಿಯಮ ಇಲ್ಲ. ಮೇಲ್ಮನೆ ವಿಪಕ್ಷ ನಾಯಕರಿಗೆ ಎಲ್ಲ ಸವಲತ್ತು ಸಿಗಲಿದೆ. ಕೊಟ್ಟಿಲ್ಲವೆಂದರೆ ನಾನು ಸೂಚನೆ ಕೊಡ್ತೇನೆ ಎಂದರು.