ಬಾರ್​ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು!

0
Spread the love

ಬೆಂಗಳೂರು:- ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ಗಲಾಟೆಯಲ್ಲಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರದಲ್ಲಿ ಜರುಗಿದೆ.

Advertisement

ಜನವರಿ 17 ರಂದು ದಾಬಸ್​ಪೇಟೆಯ ಶಾರದಾ ಕ್ರಾಸ್​​ನ GNS ಬಾರ್​ನಲ್ಲಿ ಶ್ರೀರಾಮಪುರದ 38 ವರ್ಷದ ಜೈಕುಮಾರ್ ಎನ್ನುವರ ಮೇಲೆ ಗೊಟ್ಟಿಗೆರೆಯ ವಿನೋದ್, ಹರ್ಷಿತ್, ನಾಗೇಂದ್ರ ಸೇರಿಕೊಂಡು ಹಲ್ಲೆ ಮಾಡಿದ್ದರು. ಇದರಿಂದ ಗಾಯಗೊಂಡಿದ್ದ ಜೈಕುಮಾರ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದ್ರೆ, ಚಿಕಿತ್ಸೆ ಫಲಿಸದೇ ಜೈಕುಮಾರ್ ಕೊನೆಯುಸಿರೆಳೆದಿದ್ದು, ಇದೀಗ ಆರೋಪಿಗಳ ವಿರುದ್ಧ ದಾಬಸ್​ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here