US ಅಧ್ಯಕ್ಷ ಜೋ ಬೈಡನ್ ಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಜೋ ಬೈಡನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ಶ್ವೇತಭವನ ಮಾಹಿತಿ ನೀಡಿದೆ
Advertisement
ಲಾಸ್ ವೇಗಾಸ್‌ನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಬೈಡನ್ ಅವರಿಗೆ ಕೋವಿಡ್ ದೃಢಪಟ್ಟಿದೆ. ಅವರು ಲಸಿಕೆ ಪಡೆದಿದ್ದಾರೆ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ತಿಳಿಸಿದ್ದಾರೆ.
ಬೈಡನ್ ಡೆಲವೇರ್‌ಗೆ ಹಿಂತುರುಗಿ ಅವರ ನಿವಾಸದಲ್ಲಿ ಪ್ರತ್ಯೇಕ ವಾಸದಲ್ಲಿ ಇರಲಿದ್ದಾರೆ. ಈ ವೇಳೆ ತಮ್ಮ ಕರ್ತವ್ಯವನ್ನು ನಿಭಾಯಿಸಲಿದ್ದಾರೆ. ಬೈಡನ್ ಅವರ ಆರೋಗ್ಯ ಸ್ಥಿತಿಯ ಕುರಿತು ಶ್ವೇತಭವನ ಮಾಹಿತಿ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.