ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಪಿರಿಯಡ್ಸ್ ಹೈಜೀನ್ ಕುರಿತು ಜಾಗೃತಿ ಹೆಚ್ಚಾಗುತ್ತಿದೆ.
ಮಹಿಳೆಯರು ಈಗ ಸ್ಯಾನಿಟರಿ ಪ್ಯಾಡ್‌ಗಳ ಗುಣಮಟ್ಟ ಹಾಗೂ ಅವು ಚರ್ಮದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ತಜ್ಞರ ಪ್ರಕಾರ, ಸರಿಯಾದ ಪ್ಯಾಡ್ ಆಯ್ಕೆ ಮಾಡದಿದ್ದರೆ ಚರ್ಮದ ಸಮಸ್ಯೆಗಳು ಹಾಗೂ ಸೋಂಕಿನ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ.
ವೈದ್ಯರ ಮಾಹಿತಿ ಪ್ರಕಾರ, ಸ್ಯಾನಿಟರಿ ಪ್ಯಾಡ್‌ನ ಮೇಲಿನ ಪದರ ದೇಹದ ಸೂಕ್ಷ್ಮ ಭಾಗದೊಂದಿಗೆ ನೇರ ಸಂಪರ್ಕದಲ್ಲಿರುತ್ತದೆ. ಪ್ಯಾಡ್‌ಗಳಲ್ಲಿ ಅಧಿಕ ಪ್ರಮಾಣದ ಸುಗಂಧ ದ್ರವ್ಯಗಳು ಅಥವಾ ಹಾನಿಕಾರಕ ರಾಸಾಯನಿಕಗಳಿದ್ದರೆ ಚರ್ಮದಲ್ಲಿ ಉರಿ, ಕೆಂಪು ದದ್ದುಗಳು ಹಾಗೂ ಅಲರ್ಜಿ ಸಮಸ್ಯೆಗಳು ಕಾಣಿಸಬಹುದು ಎಂದು ಅವರು ಎಚ್ಚರಿಸಿದ್ದಾರೆ.
ವಿಶೇಷವಾಗಿ ಬೇಸಿಗೆ ಮತ್ತು ತೇವಾಂಶ ಇರುವ ವಾತಾವರಣದಲ್ಲಿ ದೀರ್ಘಕಾಲ ಒಂದೇ ಪ್ಯಾಡ್ ಬಳಸುವುದರಿಂದ ಬ್ಯಾಕ್ಟೀರಿಯಾ ಹಾಗೂ ಫಂಗಲ್ ಇನ್‌ಫೆಕ್ಷನ್ ಅಪಾಯ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಮೃದುವಾದ, ಗಾಳಿಯಾಡುವ ಹಾಗೂ ಚರ್ಮ ಸ್ನೇಹಿ ಪ್ಯಾಡ್‌ಗಳನ್ನು ಬಳಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹೆಚ್ಚು ಸುಗಂಧವಿರುವ ಪ್ಯಾಡ್‌ಗಳನ್ನು ಬಳಸದಿರುವುದು ಉತ್ತಮ ಎಂದೂ ತಿಳಿಸಿದ್ದಾರೆ.
ಆರೋಗ್ಯದ ದೃಷ್ಟಿಯಿಂದ ಪ್ರತಿ 4ರಿಂದ 6 ಗಂಟೆಗಳಿಗೊಮ್ಮೆ ಪ್ಯಾಡ್ ಬದಲಾಯಿಸುವುದು ಅಗತ್ಯವಾಗಿದೆ. ಹೆಚ್ಚು ಬೆವರು ಅಥವಾ ಚರ್ಮದ ಸಮಸ್ಯೆ ಇರುವ ಮಹಿಳೆಯರಿಗೆ ಕಾಟನ್ ಆಧಾರಿತ ಪ್ಯಾಡ್‌ಗಳು ಮತ್ತು ಕಾಟನ್ ಪ್ಯಾಂಟಿ ಉತ್ತಮ ಆಯ್ಕೆ ಎಂದು ವೈದ್ಯರು ಹೇಳಿದ್ದಾರೆ.
ಇತ್ತೀಚೆಗೆ ಮೋರಿಂಗಾ ಆಧಾರಿತ ಸ್ಯಾನಿಟರಿ ಪ್ಯಾಡ್‌ಗಳು ಮಹಿಳೆಯರ ಗಮನ ಸೆಳೆಯುತ್ತಿವೆ. ಮೋರಿಂಗಾದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಹಾಗೂ ಉರಿ ಕಡಿಮೆ ಮಾಡುವ ಗುಣಗಳಿರುವುದರಿಂದ ಚರ್ಮದ ಸಮಸ್ಯೆ ಮತ್ತು ದುರ್ಗಂಧ ಕಡಿಮೆ ಮಾಡಲು ಸಹಾಯಕವಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಮಹಿಳೆಯರ ಆರೋಗ್ಯದಲ್ಲಿ ಪಿರಿಯಡ್ಸ್ ಹೈಜೀನ್ ಪ್ರಮುಖ ಪಾತ್ರ ವಹಿಸುತ್ತಿದ್ದು, ಗುಣಮಟ್ಟದ ಹಾಗೂ ಸುರಕ್ಷಿತ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಆರೋಗ್ಯ ಕಾಪಾಡುವ ಪ್ರಮುಖ ಹೆಜ್ಜೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.



