ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರ್ಕಾರದ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಗದಗ ಇವರ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾ ಮಟ್ಟದ ಕಲಾಶ್ರೀ ಸ್ಪರ್ಧೆ-2025ರಲ್ಲಿ ನಗರದ ಪ್ರತಿಷ್ಠಿತ ಶ್ರೀ ಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ವೈಷ್ಣವಿ ಷಡಕ್ಷರಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಭಾಗವಹಿಸಿ ಸಮಾಧಾನಕರ ಬಹುಮಾನವನ್ನು ಗಳಿಸಿದ್ದಾರೆ.
Advertisement
ಸಾಧಕ ವಿದ್ಯಾರ್ಥಿನಿಗೆ ಮಾರ್ಗದರ್ಶನ ಮಾಡಿದ ಅವರ ತಂದೆ ಡಾ. ಷಡಾಕ್ಷರಿ ಟಿ.ವಿ, ತಾಯಿ ಜ್ಯೋತಿಶ್ರೀ ಎಮ್.ಎಲ್, ಪ್ರಾಂಶುಪಾಲರಾದ ವಿಜಯಲಕ್ಷ್ಮೀ ಪುರಾಣಿಕ್, ಉಪ ಪ್ರಾಂಶುಪಾಲರಾದ ಶೋಭಾ ಮಾಲಿಪಾಟೀಲ ಮುಂತಾದವರು ಅಭಿನಂದಿಸಿದ್ದಾರೆ.


