ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಇಂದು ನಾಗೇಂದ್ರ ಅವರ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ಮತ್ತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಡಿ ಹಾಜರ್ ಪಡಿಸಿತ್ತು. ತನಿಖೆ ಇನ್ನಷ್ಟು ನಡೆಯಬೇಕಿರುವ ಹಿನ್ನೆಲೆಯಲ್ಲಿ ಮತ್ತೆ ಕಸ್ಟಡಿಗೆ ಕೇಳಿತ್ತು. ಮತ್ತೆ 5 ದಿನಗಳ ನ್ಯಾಯಾಂಗ ಬಂಧನ ನೀಡಿ ನ್ಯಾಯಾಲಯ ಆದೇಶ ನೀಡಿದೆ.
ಮಾಚಿ ಸಚಿವ ನಾಗೇಂದ್ರ ಪರ ಹಿರಿಯ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದರು. ನಾಗೇಂದ್ರ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಚಿಂಗ್ ಮುಗಿದಿದೆ. ಸೀಜಿಂಗ್ ಕಾರ್ಯ ಮುಗಿದಿದೆ. ಆರೋಪಿಯ ವಿಚಾರಣೆಯೂ ಮುಗಿದಿದೆ. ಮತ್ತೆ ಕಸ್ಟಡಿಗೆ ಪಡೆಯುವ ಅವಶ್ಯಕತೆ ಇಲ್ಲ. ಇಡಿ ಅಧಿಕಾರಿಗಳು ಪೊಲೀಸರಲ್ಲ. ಅವರನ್ನು ಕಸ್ಟಡಿಗೆ ಪಡೆದ ಉದ್ದೇಶ ಮುಗಿದಿದೆ. ಮತ್ತೆ ಕಸ್ಟಡಿಗೆ ಪಡೆದು ವಿಚಾರಣೆ ಮಾಡೋದೇನಿದೆ? ಎಂದು ಪ್ರಶ್ನಿಸಿದ ನಾಗೇಂದ್ರ ಪರ ವಕೀಲ ಶ್ಯಾಮ್ ಸುಂದರ್, ಸುಪ್ರೀಂ ಕೋರ್ಟ್ ಆದೇಶಗಳನ್ನು ಉಲ್ಲೇಖಿಸಿದರು.