ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೆ ಇಡಿ ದಾಳಿ!

0
Spread the love

ಬಳ್ಳಾರಿ:- ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೆ ಇಡಿ ದಾಳಿ ಮಾಡಿದೆ.

Advertisement

ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ಇಡಿ ಜಾರ್ಜ್​​ಶೀಟ್ ಸಲ್ಲಿಕೆಗೆ ಸಮಯ ಹತ್ತಿರ ಬಂದಿರುವುದರಿಂದ ಅಧಿಕಾರಿಗಳು ದಾಳಿ ಚುರುಕುಗೊಳಿಸಿದ್ದಾರೆ ಎನ್ನಲಾಗಿದೆ.

ಹಗರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಕಳೆದ ತಿಂಗಳಷ್ಟೇ ಬೆಂಗಳೂರು, ರಾಯಚೂರು, ಬಳ್ಳಾರಿ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ದಾಳಿ ನಡೆಸಿ ಮಾಹಿತಿ ಕಲೆಹಾಕಿದ್ದರು.

ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ಗಸನಗೌಡ ದದ್ದಲ್ ನಿವಾಸ, ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕ ನಾಗೇಂದ್ರ ಮನೆ ಮೇಲೂ ದಾಳಿ ನಡೆಸಿದ್ದರು.


Spread the love

LEAVE A REPLY

Please enter your comment!
Please enter your name here