HomeKarnataka Newsವಾಲ್ಮೀಕಿ ನಿಗಮದ ಹಗರಣ: ತನಿಖೆಯ ಹೊಣೆ CBIಗೆ ವಹಿಸಲು ಹೈಕೋರ್ಟ್ ನಕಾರ

ವಾಲ್ಮೀಕಿ ನಿಗಮದ ಹಗರಣ: ತನಿಖೆಯ ಹೊಣೆ CBIಗೆ ವಹಿಸಲು ಹೈಕೋರ್ಟ್ ನಕಾರ

For Dai;y Updates Join Our whatsapp Group

ಬೆಂಗಳೂರು: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು  ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೆಪ್ಟೆಂಬರ್ 30ರಂದು ಮುಕ್ತಾಯಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ಬೆಂಗಳೂರು ಪೂರ್ವ ವಲಯದ ಸಿಬಿಐ ಡಿಜಿಎಂ ಜೆ. ಮಹೇಶ್ ಎಂಬುವವರು ಈ ಹಿಂದೆಯೇ  ಸರ್ಕಾರಿ ಅಧಿಕಾರಿಗಳು,‌ ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ದೂರಿನಲ್ಲಿ ಉಲ್ಲೇಖ ಮಾಡಿದ್ದರು. ಯೂನಿಯನ್ ಬ್ಯಾಂಕ್‌ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲು ಮಾಡಿತ್ತು.

ಈ ನಡುವೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿ ಆದೇಶಿಸಿತ್ತು. ಎಸ್‌ಐಟಿ ಈಗಾಗಲೇ ಪ್ರಕರಣದ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ವಾಲ್ಮಿಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಬಗ್ಗೆ ಈಗಾಗಲೇ ಜಾರಿ ನಿರ್ದೇಶನಾಲಯ ಸಹ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img