HomeKarnataka Newsಬಡವರಿಗೆ ಕೊಡುವ ಹಣವನ್ನ ವಾಲ್ಮೀಕಿ ನಿಗಮದಲ್ಲಿ ನುಂಗಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

ಬಡವರಿಗೆ ಕೊಡುವ ಹಣವನ್ನ ವಾಲ್ಮೀಕಿ ನಿಗಮದಲ್ಲಿ ನುಂಗಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

For Dai;y Updates Join Our whatsapp Group

Spread the love

ಮೈಸೂರು: ಬಡವರಿಗೆ ಕೊಡುವ ಹಣವನ್ನ ವಾಲ್ಮೀಕಿ ನಿಗಮದಲ್ಲಿ ನುಂಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಇಂದು ಪೇಪರ್‌ನಲ್ಲಿ ಅದ್ಯಾವುದೋ ಜಾಹಿರಾತು ಕೊಟ್ಟಿದ್ದಾರೆ. ದುಷ್ಟಶಕ್ತಿಗಳ ಎದುರು ಸತ್ಯದ ಜಯ ಅಂತೆ. ಕರ್ನಾಟಕ ರಾಜ್ಯವನ್ನ ವಾಮಾಮಾರ್ಗ, ಮೋಸದಿಂದ ಅಸ್ತಿರಗೊಳಿಸುತ್ತಿದ್ದಾರೆ ಅಂತ ಕೊಟ್ಟಿದ್ದಾರೆ. ಆದರೆ ವಾಮಾಮಾರ್ಗ, ಮೋಸವನ್ನ ಸ್ಥಿರಗೊಳಿಸಲು ಹೊರಟಿರೋ ಸರ್ಕಾರ ಇದು.

ಇವರು ಯಾವತ್ತು ಸತ್ಯ ಧರ್ಮದಲ್ಲಿ ಉಳಿದಿದ್ದಾರೆ ಎಂದು ಸಿದ್ದರಾಮಯ್ಯ ಅವರನ್ನ ಕೇಳುತ್ತೇನೆ. ಬಡವರಿಗೆ ಕೊಡುವ ಹಣವನ್ನ ವಾಲ್ಮೀಕಿ ನಿಗಮದಲ್ಲಿ ನುಂಗಿದ್ದಾರೆ. ಮೋಸಮಾಡಿ ಸೈಟ್ ತೆಗೆದುಕೊಂಡಿದ್ರು. ಬಳಿಕ ಪರಿಸ್ಥಿತಿ ವ್ಯತಿರಿಕ್ತವಾದಾಗ ವಾಪಸ್ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆ. ಇವರೇ ಆರ್ಥಿಕ ಸಚಿವರು, ಇವರ ಇಲಾಖೆಗೆ ಸಂಬಂಧಪಟ್ಟ ಹಣ ಬಿಡುಗಡೆ ಆಗಿದೆ. ಅದರ ಸತ್ಯಾಂಶಗಳು ಹೊರಬರುವ ಕಾಲ ದೂರ ಇಲ್ಲ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!