ಬೆಂಗಳೂರು:- ವಾಲ್ಮೀಕಿ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಬ್ಯಾಂಕ್ ರಿಟ್ ಅರ್ಜಿ ಸಲ್ಲಿಸಿದೆ. ಯೂನಿಯನ್ ಬ್ಯಾಂಕ್ ಪರ ಅಟಾರ್ನಿ ಜನರಲ್ ವೆಂಕಟರಮಣಿ ವಾದ ಮಂಡಿಸಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿದರು.
50 ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ಹಗರಣವಿದ್ದರೆ ಸಿಬಿಐ ತನಿಖೆ ನಡೆಸಬೇಕು. ಸಿಬಿಐಗೆ ಮಾತ್ರ ಬ್ಯಾಂಕ್ ಕೇಸ್ಗಳ ತನಿಖೆ ಅಧಿಕಾರವಿದೆ. ಬ್ಯಾಂಕ್ ಅಧಿಕಾರಿಗಳಲ್ಲದೆ ಇತರರನ್ನೂ ಸಿಬಿಐ ತನಿಖೆಗೆ ಒಳಪಡಿಸಬಹುದು. ಆದರೆ, ಸಿಬಿಐ ಅಧಿಕಾರವ್ಯಾಪ್ತಿಯಲ್ಲಿ ಎಸ್ಐಟಿ ತನಿಖೆ ನಡೆಸುವಂತಿಲ್ಲ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪರ ಅಟಾರ್ನಿ ಜನರಲ್ ವಾದ ಮಂಡಿಸಿದರು.
ಪೊಲೀಸ್ ತನಿಖೆ ನಡೆಸುವುದು ರಾಜ್ಯಗಳ ಅಧಿಕಾರ ವ್ಯಾಪ್ತಿಯಲ್ಲಿದೆ. ಬ್ಯಾಂಕ್ ಅರ್ಜಿಗೆ ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸುತ್ತೇವೆ. ಎಸ್ಐಟಿಯ ಆರೋಪಪಟ್ಟಿಯಲ್ಲಿ ಬ್ಯಾಂಕ್ ಅಧಿಕಾರಿಗಳನ್ನು ಸೇರಿಸಿಲ್ಲ. ಪ್ರಕರಣ ರದ್ದು ಕೋರಿದ ಬ್ಯಾಂಕ್ ಅಧಿಕಾರಿಗಳ ಅರ್ಜಿ ಮುಕ್ತಾಯಗೊಳಿಸಬೇಕು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದರು. ಸದ್ಯ ಅರ್ಜಿಯನ್ನು ಮುಕ್ತಾಯಗೊಳಿಸಿರುವ ಹೈಕೋರ್ಟ್ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.