ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಲೆದಂಡ ಖಚಿತ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ವಿಚಾರ ಕೋರ್ಟ್‌ನಲ್ಲಿದೆ. ಆ ಕೇಸ್ ವಿಚಾರ ಏನೇ ಆಗಲಿ ಅದು ಬೇರೆ ವಿಚಾರ. ಆದರೆ, ವಾಲ್ಮೀಕಿ ಹಗರಣದಲ್ಲಿ ಸಿಎಂ ತಲೆದಂಡ ನಿಶ್ಚಿತ.
ಅರ್ಥಿಕ ಹಗರಣ ಆದಾಗ ಅದಕ್ಕೆ ಅರ್ಥಿಕ ಸಚಿವರೇ ಹೊಣೆಗಾರರು. ಸಿಎಂ ಅವರೇ 88 ಕೋಟಿ ರೂಪಾಯಿ ಅವ್ಯವಹಾರ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು. ವಾಲ್ಮೀಕಿ ನಿಗಮದ ದುಡ್ಡಲ್ಲಿ ಬಳ್ಳಾರಿ ಲೋಕಸಭಾ ಚುನಾವಣೆ ಮಾಡಲಾಗಿದೆ. ಆ ಹಣವನ್ನು ಮದ್ಯ ಖರೀದಿಗೆ ಬಳಸಿರುವುದು ಸಾಬೀತಾಗಿದೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ ಎಂದು ಪ್ರತಾಪ್ ಸಿಂಹ ಹೇಳಿದರು.



