ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಕೋರಿ ಬಿ.ನಾಗೇಂದ್ರ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, 2 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿ ಆದೇಶಿಸಿದೆ.
Advertisement
ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ತಲೆದಂಡವಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶಾನಾಲಯದ ಅಧಿಕಾರಿಗಳು ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. 187 ಕೋಟಿ ರೂಪಾಯಿ ಹಗರಣ ಸಂಬಂಧ 4ಸಾವಿರದ 970 ಪುಟಗಳ ಚಾರ್ಜ್‌ಶೀಟ್ ಜೊತೆಗೆ 144 ಪುಟಗಳ ದೂರು ಸಲ್ಲಿಸಿದ್ದರು. ಇಡಿ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ A1 ಆಗಿದ್ದರು.