ಹಾಸನ:- ಆಲೂರು ತಾಲೂಕಿನ ಬೆಳಮೆ ಗ್ರಾಮದಲ್ಲಿ ವರಮಹಾಲಕ್ಷ್ಮೀ ಹಬ್ಬಕ್ಕೆ ತಾವರೆ ಹೂ ಕೀಳಲು ಹೋಗಿ ವ್ಯಕ್ತಿ ದುರ್ಮರಣವನ್ನಪ್ಪಿದ ಘಟನೆ ಜರುಗಿದೆ.
Advertisement
ದೇವರಾಜ್ (38) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ವ್ಯಕ್ತಿ. ಈತ ರಾಮೇಶ್ವರ ಗ್ರಾಮದಲ್ಲಿ ವಾಸವಿದ್ದ ಬಿಕ್ಕೋಡು ಗ್ರಾಮದ ನಿವಾಸಿ. ನಾಳೆ ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆಯಲ್ಲಿ ತಾವರೆ ಹೂವು ಕೀಳಲು ಕೆರೆಗೆ ಇಳಿದಿದ್ದ ದೇವರಾಜ್ ಅಲ್ಲೇ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಸತತ ಮೂರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ ಅಗ್ನಿಶಾಮಕದಳದ ಸಿಬ್ಬಂದಿ ಮೃತದೇಹ ಮೇಲೆತ್ತಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.