ಉತ್ತರಪ್ರದೇಶ: ಉತ್ತರಪ್ರದೇಶದ ವಾರಣಾಸಿಯಲ್ಲಿ 2200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣವನ್ನ ಜಮೆ ಮಾಡಿದರು.
Advertisement
9.7 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 20,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣವನ್ನ ಜಮೆ ಮಾಡಿದರು.
ಇದೇ ವೇಳೆ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಆಪರೇಷನ್ ಸಿಂಧೂರ ಯಶಸ್ಸಿನ ಕುರಿತು ವಿವರಣೆ ನೀಡಿದ್ರು. ಆಪರೇಷನ್ ಸಿಂಧೂರ ಯಶಸ್ಸನ್ನ ನಾನು ಮಹಾದೇವನಿಗೆ ಅರ್ಪಿಸುತ್ತೇನೆ ಎಂದರು.