ಬೆಂಗಳೂರು: ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರಿನಲ್ಲಿ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ, ದೀಪೋತ್ಸವ ಹಾಗೂ ಪಲ್ಲಕ್ಕಿ ಕರಗ ಮಹೋತ್ಸವವು ಇಂದಿನಿಂದ 27ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಜಾತ್ರಾ ಸ್ಥಳದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೂರ್ವ ವಿಭಾಗ ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳು:-
ವೈಟ್‌ಫೀಲ್ಡ್‌ನಿಂದ ಗುಂಜೂರು ಕಡೆಗೆ ಬರುವ ಲಘು ವಾಹನಗಳು ಇಮ್ಮಡಿಹಳ್ಳಿ, ವಾಲೇಪುರ ಸೂರಹುಣಸೆ ರಸ್ತೆಯಿಂದ ಮಧುರನಗರದ ಮೂಲಕ ಹಲಸಹಳ್ಳಿ ಗುಂಜೂರು ಕಡೆಗೆ ಹಾಗೂ ವರ್ತೂರು ಪೊಲೀಸ್ ಠಾಣೆ ಕಡೆಯಿಂದ ಸಂಚರಿಸಬಹುದಾಗಿದೆ.
ಗುಂಜೂರಿನಿಂದ ವೈಟ್ ಫೀಲ್ಡ್ ಕಡೆಗೆ ಸಂಚರಿಸುವ ಲಘು ವಾಹನಗಳು ಗುಂಜೂರಿನ ಶ್ರೀರಾಮದೇವಾಲಯದ ಬಳಿ ಬಲ ತಿರುವು ಪಡೆದು ಹಲಸಹಳ್ಳಿ ರಸ್ತೆಯಿಂದ ಮಧುರನಗರದ ಮೂಲಕ ಸೂರಹುಣಸೆ ಮತ್ತು ವಾಲೇಪುರ ಮೂಲಕ ಹಾಗೂ ವರ್ತೂರು ಕಾಲೇಜು ಮೂಲಕ ವೈಟ್ ಫೀಲ್ಡ್ ಕಡೆಗೆ ಸಂಚರಿಸಬಹುದು.
ಗುಂಜೂರು ಕಡೆಯಿಂದ ಬರುವ ವಾಹನ ಸವಾರರು ಕುಂದಲಹಳ್ಳಿ ಮತ್ತು ಮಾರತ್ ಹಳ್ಳಿ ಕಡೆಗೆ ಸಂಚರಿಸುವ ಲಘು ವಾಹನಗಳು ಗುಂಜೂರು ಕೆ.ಎಫ್.ಸಿ ರಸ್ತೆ, ಪಣತ್ತೂರು ರೈಲ್ವೆ ಬ್ರಿಜ್ ಮೂಲಕ ಹಾಗೂ ವಿಬ್ ಗಯಾರ್ ಕಡೆಯಿಂದ ಸಂಚರಿಸವಂತೆ ಸಂಚಾರ ಪೊಲೀಸರು ಕೋರಿದ್ದಾರೆ.



