ಮುಂದುವರೆದ ವರುಣಾರ್ಭಟ: ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ!

0
Spread the love

ಬೆಂಗಳೂರು:-ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

Advertisement

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್ ಘೋಷಣೆ ಮಾಡಿದೆ. ಉಳಿದಂತೆ ರಾಜ್ಯಾದ್ಯಂತ ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹಾಸನದಲ್ಲಿ ಶಾಲೆಗಳಿಗೆ ರಜೆ ಘೋಷಣೆ:

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಹೀಗಾಗಿ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಕಳೆದ 2 ದಿನಗಳಿಂದ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡದ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ;

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.

ಚಿಕ್ಕಮಗಳೂರು ಶಾಲೆಗಳಿಗೆ ರಜೆ:

ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಮಲೆನಾಡು ಭಾಗದ ಶಾಲೆಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ರಜೆ ಘೋಷಿಸಿದ್ದಾರೆ. ಮೂಡಿಗೆರೆ, ಕಳಸ, ಶೃಂಗೇರಿ, ಎನ್‌ಆರ್‌ ಪುರ ಹಾಗೂ ಕೊಪ್ಪ ತಾಲ್ಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಕಾಲೇಜುಗಳು ಎಂದಿನಂತೆ ತೆರೆದಿರಲಿವೆ ಎಂದು ತಿಳಿಸಿದ್ದಾರೆ.

ಇನ್ನೂ ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆಸಿದ್ದು, ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾರ್ಭಟ ಹೆಚ್ಚಾಗಿದ್ದು, ಜನರು ಪರದಾಡುವಂತಾಗಿದೆ. ಈ ವಾರವೂ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Spread the love

LEAVE A REPLY

Please enter your comment!
Please enter your name here