ಬೆಂಗಳೂರು:- ಕರ್ನಾಟಕದಲ್ಲಿ ವರುಣಾರ್ಭಟ ಮುಂದುವರಿದಿದ್ದು, ಆ.3 ರವರೆಗೂ ಕೆಲವು ಜಿಲ್ಲೆಗಳಲ್ಲಿ ಜೋರು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆಯಾಗಲಿದೆ. ವಿಜಯಪುರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ,ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್ಎಲ್ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



