ರಾಯಚೂರು:- ರಾಯಚೂರು ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಪರಿಣಾಮ ರಸ್ತೆಗಳೆಲ್ಲಾ ಕೆರೆಯಂತಾಗಿದೆ.
Advertisement
ಇದರಿಂದ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ. ರಸ್ತೆಯಲ್ಲಿ ನಿರ್ಮಾಣವಾಗಿರುವ ದೊಡ್ಡ ಗುಂಡಿಗಳಿಂದಾಗಿ ಮಳೆ ಬಂದರೆ ಸಾಕು ಬೈಕ್ ಸಾವಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಅದಲ್ಲದೇ ಮಿನಿ ವಿಧಾನಸೌಧ ಕಚೇರಿ ಮುಂಭಾಗದಲ್ಲಿ ನೀರು ನಿಂತ ಪರಿಣಾಮ ಜನರು ಪರದಾಡುತ್ತಿದ್ದಾರೆ.
ಇನ್ನೂ ಪಟ್ಟಣದ ಉಪ್ಪಾರ ಓಣಿ, ಆನಂದ ಟಾಕೀಸ್ ರಸ್ತೆ, ಹಳೆ ಬಸ್ ನಿಲ್ದಾಣ ರಸ್ತೆಯಲ್ಲೆಲ್ಲಾ ಚರಂಡಿ ನೀರು ಹರಿದಿದೆ. ಜಿಲ್ಲೆಯ ಲಿಂಗಸುಗೂರು, ಸಿಂಧನೂರು ತಾಲೂಕು ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.