ಬೆಂಗಳೂರು:- ಕರ್ನಾಟಕದಲ್ಲಿ ವರುಣನ ಆರ್ಭಟ ಕಡಿಮೆ ಆಗಿದ್ದು, ಕೆಲವೇ ಕೆಲವು ಕಡೆ ಮಾತ್ರ ಮಳೆ ಆಗಲಿದೆ.
ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.
ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿ ಏರ್ಪೋರ್ಟ್ನಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ. ಎಚ್ಎಎಲ್ನಲ್ಲಿ 24.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



