ಬೆಂಗಳೂರು:- ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬರಗಿ, ಗದಗ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಹಾವೇರಿ,ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



