ವಿಜಯಸಾಕ್ಷಿ ಸುದ್ದಿ, ಗದಗ: ಗದಗ–ಬೆಟಗೇರಿ ಅವಳಿ ನಗರದ ಭಕ್ತರ ಆರಾಧ್ಯ ದೈವವಾದ ಕೈಲಾಸ ವರಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಯುವ ಮುಖಂಡ ವಸಂತ ಪಡಗದ ಅವರು ನೂತನ ತುಲಾಭಾರದ ತಕ್ಕಡಿಯನ್ನು ಕೊಡುಗೆಯಾಗಿ ಸಮರ್ಪಿಸಿದರು.
ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೂವಿನಿಂದ ಅಲಂಕೃತಗೊಂಡ ತುಲಾಭಾರದ ತಕ್ಕಡಿಯನ್ನು ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು.
ವಸಂತ ಪಡಗದ ಅವರ ಧಾರ್ಮಿಕ ಸೇವಾ ಕಾರ್ಯವನ್ನು ಮೆಚ್ಚಿದ ದೇವಸ್ಥಾನದ ಪ್ರಮುಖರು ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಿ. ಪ್ರಸನ್ನಕುಮಾರ, ಕಾರ್ಯದರ್ಶಿ ಯೋಗೀಶ್ ವೊರಾ, ಕೆ. ವೆಂಕಟರಮಣ ಭಟ್, ವ್ಯವಸ್ಥಾಪಕ ರಾಮಚಂದ್ರ ಹೆಗಡೆ, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಅರ್ಚಕ ವೃಂದ, ಸ್ಥಳೀಯ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.



