HomeBengaluru Newsಬೆಂಗಳೂರಿನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ ಇಲ್ಲಿದೆ!

ಬೆಂಗಳೂರಿನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ ಇಲ್ಲಿದೆ!

For Dai;y Updates Join Our whatsapp Group

ಬೆಂಗಳೂರು:- ವೈಟ್ ಟಾಪಿಂಗ್ ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಬಿಟಿಎಂ ಲೇಔಟ್ ಮತ್ತು ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಿ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಬಿಟಿಎಂ ಲೇಔಟ್ 29ನೇ ಮುಖ್ಯ ಜಂಕ್ಷನ್​ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವುದರಿಂದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಹಾಗೇ ಪರ್ಯಾಯ ಮಾರ್ಗವನ್ನು ಬೆಂಗಳೂರು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಟ್ವಿಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬನ್ನೇರುಘಟ್ಟ ಮುಖ್ಯ ರಸ್ತೆಯ, ಜಯದೇವಾ ಜಂಕ್ಷನ್​​ನಲ್ಲಿ ಔಟರ್ ರಿಂಗ್ ರಸ್ತೆಯ ಸಿಲ್ಕ್ ಬೋರ್ಡ ಜಂಕ್ಷನ್​ನಿಂದ ಬರುವ ವಾಹನಗಳು ಮುಕ್ತ ಎಡ ತಿರುವು ಪಡೆಯಲು ಅವಕಾಶ ನೀಡಲಾಗಿದೆ. ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ಜಂಕ್ಷನ್​ನಿಂದ ಜಯದೇವ ಜಂಕ್ಷನ್ ಕಡೆಗೆ ಬರುವ ವಾಹನಗಳು ರಿಂಗ್ ರಸ್ತೆಯನ್ನು ತಲುಪಲು ಜಯದೇವ ಜಂಕ್ಷನ್‌ನ ಸರ್ವಿಸ್ ರಸ್ತೆಯ ಮುಖಾಂತರ ಚಲಿಸಿ ಮುಕ್ತ ಎಡ ತಿರುವು ಪಡೆದು ಬನಶಂಕರಿ ಕಡೆಗೆ ಚಲಿಸಬಹುದಾಗಿದೆ.

ಬನ್ನೇರುಘಟ್ಟ ರಸ್ತೆಯ ಜಯದೇವ ಜಂಕ್ಷನ್‌ನಲ್ಲಿ ರಿಂಗ್ ರಸ್ತೆಯಲ್ಲಿ ಬರುವ ವಾಹನಗಳಿಗೆ ಮುಕ್ತ ಎಡ ತಿರುವು ಕಲ್ಪಿಸಲಾಗಿದ್ದು, ಸಾಯಿರಾಂ ಜಂಕ್ಷನ್‌ನಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರಸ್ತುತ ಸಾಯಿರಾಂ ಜಂಕ್ಷನ್‌ನಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ರಸ್ತೆ ವಿಭಜಕವನ್ನು ಮುಚ್ಚಲಾಗಿದೆ.

ಪರ್ಯಾಯ ಮಾರ್ಗಗಳು:

ಔಟರ್ ರಿಂಗ್ ರಸ್ತೆಯ ಸಿಲ್ಕ್ ಬೋರ್ಡ ಜಂಕ್ಷನ್​ನಿಂದ ಜಯದೇವಾ ಜಂಕ್ಷನ್ ಕಡೆಗೆ ಚಲಿಸುವ ವಾಹನಗಳು 29ನೇ ಮುಖ್ಯ ರಸ್ತೆ ಔಟರ್ ರಿಂಗ್ ರಸ್ತೆ ಜಂಕ್ಷನ್​ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಯುಕ್ತ ಮುಚ್ಚಲಾಗಿರುವ ರಸ್ತೆಗೆ ಪರ್ಯಾಯವಾಗಿ ಬಿಟಿಎಂ 16ಮೇನ್ ಜಂಕ್ಷನ್ ಮುಖಾಂತರವಾಗಿ ನೇರವಾಗಿ ಚಲಿಸಿ ಜಯದೇವಾ ಜಂಕ್ಷನ್ ತಲುಪಿ ಮುಕ್ತ ಎಡ ತಿರುವು ಪಡೆದು ಬನ್ನೇರುಘಟ್ಟ ಮುಖ್ಯ ರಸ್ತೆಯನ್ನು ತಲುಪಬಹುದಾಗಿದೆ.

ಬನ್ನೇರುಘಟ್ಟ ಮುಖ್ಯ ರಸ್ತೆಯ ವೆಗಾ ಸಿಟಿ ಮಾಲ್ ಜಂಕ್ಷನ್​ನಿಂದ ಜಯದೇವಾ ಜಂಕ್ಷನ್ ಕಡೆಗೆ ಚಲಿಸುವ ವಾಹನಗಳು ಸಾಯಿರಾಂ ಜಂಕ್ಷನ್​ನಲ್ಲಿ ಜಯದೇವಾ ಫ್ಲೈ ಔವರ್‌ನ ಸರ್ವಿಸ್ ರಸ್ತೆಯಲ್ಲಿ ಚಲಿಸಿ ಔಟರ್ ರಿಂಗ್ ರಸ್ತೆಯನ್ನು ತಲುಪಬಹುದಾಗಿದೆ.

ಸಾಯಿರಾಂ ಜಂಕ್ಷನ್‌ನಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ರಸ್ತೆ ವಿಭಜಕವನ್ನು ಮುಚ್ಚಲಾಗಿದ್ದು ಪರ್ಯಾಯವಾಗಿ ಬನ್ನೇರುಘಟ್ಟಿ ಮುಖ್ಯ ರಸ್ತೆಯ ಶಿಲ್ಪಕಲಾ ಜಂಕ್ಷನ್‌ನಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಪರ್ಯಾಯ ಸಂಚಾರ ಮಾರ್ಗ:-

ವೆಸ್ಟ್ ಆಫ್ ಕಾರ್ಡ್ ರೋಡ್ ಮೂಲಕ ವಿಜಯನಗರ, ಚಂದ್ರಾಲೇಔಟ್, ಮೈಸೂರು ರಸ್ತೆ ಕಡೆಗೆ ಚಲಿಸುವ ಎಲ್ಲಾ ವಾಹನಗಳು ವೆಸ್ಟ್ ಆಫ್ ಕಾರ್ಡ್ ರೋಡ್‌ ಎ.ಸಿ.ಸಿ. ಕಾಲೇಜು ಜಂಕ್ಷನ್‌ನಲ್ಲಿ ಸರ್ವಿಸ್ ರಸ್ತೆಗೆ ಸಾಗಿ, ಮುಂದೆ ಎಂ.ಸಿ. ಸರ್ಕಲ್ ಮೂಲಕ ಸರ್ವಿಸ್ ರಸ್ತೆಯ ಮೂಲಕ ಪಿ & ಟಿ ಜಂಕ್ಷನ್ ವರೆಗೆ ಹೋಗಿ ಮತ್ತೆ ವೆಸ್ಟ್ ಆಫ್ ಕಾರ್ಡ್ ರೋಡ್ ಸೇರಿ ಮುಂದೆ ಸಂಚರಿಸಬಹುದಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img