ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ, ತಮ್ಮ ಹಾಸ್ಯಮಯ ಪಾತ್ರಗಳಿಂದ ಜನಪ್ರಿಯರಾಗಿದ್ದ ಎಂ.ಎಸ್.ಉಮೇಶ್ ರವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
Advertisement
ಸುಮಾರು ಐದಾರು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು, ತಮ್ಮ ವಿಶಿಷ್ಟ ಅಭಿನಯ ಮತ್ತು ಸಂಭಾಷಣಾ ಶೈಲಿಯ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಅಗಲಿಕೆಯಿಂದ ಚಿತ್ರರಂಗ ತನ್ನ ಒಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.


