ಮುಂಬೈ:- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರು ವಿಧಿವಶರಾಗಿದ್ದಾರೆ.
ಧರ್ಮೇಂದ್ರ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿದ್ದ ಅವರ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಧರ್ಮೇಂದ್ರ, ಪತ್ನಿ ಹೇಮಾ ಮಾಲಿನಿ, ಪ್ರಕಾಶ್ ಕೌರ್ ಮಕ್ಕಳಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್, ವಿಜೇತಾ, ಅಜೀತಾ, ಇಶಾ ಡಿಯೋಲ್ ಮತ್ತು ಅಹಾನಾ ಡಿಯೋಲ್ ಅವರನ್ನು ಅಗಲಿದ್ದಾರೆ.
ಸಲ್ಮಾನ್ ಖಾನ್, ಶಾರುಖ್ ಖಾನ್, ಗೋವಿಂದ, ಮತ್ತು ಅಮೀಷಾ ಪಟೇಲ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ತಡರಾತ್ರಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಧರ್ಮೇಂದ್ರ ನಿಧನಕ್ಕೆ ಅಭಿಮಾನಿಗಳು, ಚಿತ್ರ ಕಲಾವಿದರಿಂದ ಶ್ರದ್ಧಾಂಜಲಿಗಳು ಹರಿದು ಬರುತ್ತಿವೆ.



