HomeBengaluru Newsಹೃದಯಾಘಾತದಿಂದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ!

ಹೃದಯಾಘಾತದಿಂದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ!

For Dai;y Updates Join Our whatsapp Group

Spread the love

ಬೆಂಗಳೂರು:- ಹೆಡ್​ಲೈನ್ ಮಾಸ್ತರ್ ಎಂದೇ ಪರಿಚಿತರಾಗಿದ್ದ 59 ವರ್ಷದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ ಹೊಂದಿದ್ದಾರೆ.

ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ್​ ನಾಡಿಗೇರ ಅವರು ಶೀರ್ಷಿಕೆಗಳ ಮೂಲಕವೇ ಮನೆ ಮಾತಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.

ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಪ್ರಾಥಮಿಕ ಮತ್ತು ಪೌಢ ಶಿಕ್ಷಣವನ್ನು ರಾಣೆಬೆನ್ನೂರಿನಲ್ಲಿ ಪೂರ್ಣಗೊಳಿಸಿದರು. ನಂತರ ಧಾರವಾಡದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದರು. ವಸಂತ ನಾಡಿಗೇರ್​ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರದಲ್ಲಿ ಎಂಎಸ್​ಸಿ ಪದವಿ ಪಡೆದರು. ವಸಂತ ನಾಡಿಗೇರ್​ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯದ ಹಳೇ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!