ಬೆಂಗಳೂರು:- ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ಅವರು ತಮ್ಮ 97 ವರ್ಷಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
Advertisement
ವಿಮಲಾ ಅವರ ಪುತ್ರಿ ರೇವತಿ ವಿದೇಶದಲ್ಲಿದ್ದು, ಅವರು ಬೆಂಗಳೂರಿಗೆ ಬಂದ ಬಳಿಕ ಇದೇ ಫೆ,27 ರಂದು ಅಂತ್ಯಕ್ರಿಯೆ ನಡೆಯಲಿದೆ.
ಇನ್ನೂ ವಿಮಲಾ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದ ಅವರು, ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಜೊತೆಗೆ ಶಿಕ್ಷಣ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅನನ್ಯವಾಗಿದೆ.