HomeKarnataka Newsಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ: ಹೂಗುಚ್ಛ ನೀಡಿ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ: ಹೂಗುಚ್ಛ ನೀಡಿ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಖರ್ ಹಾಗೂ ಅವರ ಪತ್ನಿ ಶ್ರೀಮತಿ ಸುದೇಶ ಧನಖರ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿರುವ ಎಲ್ಲಾ ರಾಜ್ಯಗಳ ಲೋಕಸೇವಾ ಆಯೋಗಗಳ 25ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ನಂತರ, ಬಿಇಎಲ್ ನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಬಿಹೆಚ್ಇಎಲ್ ನಲ್ಲಿ ಹಮ್ಮಿಕೊಳ್ಳಲಾಗಿರುವ ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಇಂದು ಸಂಜೆಯೇ ಮರಳಿ ನವದೆಹಲಿಗೆ ತೆರಳಲಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ದಂಪತಿ ಸಮೇತರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಮ್ ಸಿ ಸುಧಾಕರ್ ಸೇರಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!