ಮಾಜಿ ಪ್ರಧಾನಿ HD ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಭೇಟಿ: ಹೂಗುಚ್ಛ ನೀಡಿ ಸ್ವಾಗತ!

0
Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ HD ದೇವೇಗೌಡರ ನಿವಾಸಕ್ಕೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದರು.

Advertisement

ಈ ವೇಳೆ ಉಪರಾಷ್ಟ್ರಪತಿ ಅವರಿಗೆ ಕೇಂದ್ರ ಸಚಿವ HD ಕುಮಾರಸ್ವಾಮಿ ಅವರು, ಹೂಗುಚ್ಛ ನೀಡಿ ಬರಮಾಡಿಕೊಂಡರು.

ಬಳಿಕ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು, ಹೆಚ್​ಡಿ ದೇವೇಗೌಡ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರ ಜೊತೆ ಕೆಲ ಹೊತ್ತು ಮಾತನಾಡಿ, ತೆರಳಿದ್ದಾರೆ.

ನಿನ್ನೆ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಭಾಗಿಯಾಗಿದ್ದರು. ಕಾರ್ಯಕ್ರಮ ಬಳಿಕ ಇಬ್ಬರು ನಾಯಕರು ಒಟ್ಟಿಗೆ ಬೆಂಗಳೂರಿಗೆ ಆಗಮಿಸಿದರು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here