ಬೆಂಗಳೂರು: ಉಪರಾಷ್ಟ್ರಪತಿ ಅನಿರೀಕ್ಷಿತ ರಾಜೀನಾಮೆ ಎಲ್ಲರನ್ನೂ ಅಚ್ಚರಿಗೊಳಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಉಪರಾಷ್ಟ್ರಪತಿ ಅನಿರೀಕ್ಷಿತ ರಾಜೀನಾಮೆ ಎಲ್ಲರನ್ನೂ ಅಚ್ಚರಿಗೊಳಿಸಿದೆ.
ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದೇ ಇದಕ್ಕೆ ಕಾರಣ. ಬಿಜೆಪಿಯಲ್ಲಿರುವ ಸರ್ವಾಧಿಕಾರ ಧೋರಣೆಯೇ ಜಗದೀಪ್ ಧನಕರ್ ಅವರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದ್ದಾರೆ.
ಇಡೀ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿದರೆ ಬಿಜೆಪಿಯಲ್ಲಿ ಏನೋ ಸರಿಯಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಇಡೀ ಪಕ್ಷ ಇಬ್ಬರ ಕೈಯಲ್ಲಿದೆ.
ಸರ್ವಾಧಿಕಾರ ಹೆಚ್ಚಾಗಿರುವುದರಿಂದ ಬೇರೆ ಯಾವ ನಾಯಕರೂ ಮಾತನಾಡದೇ ಸುಮ್ಮನಿದ್ದಾರೆ. ಜನರಿಗೆ ಇದು ಗೊತ್ತಾಗುವುದಿಲ್ಲ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಆದರೆ ಇಡೀ ಪ್ರಕರಣದಿಂದ ಬಿಜೆಪಿಯ ಬಣ್ಣ ಸಂಪೂರ್ಣ ಬಯಲಾಗಿದೆ ಎಂದು ಹೇಳಿದರು.



