ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ತಂಡಕ್ಕೆ ಜಯ

0
sveep
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಟೆನ್ನಿಸ್ ಬಾಲ್ ಕ್ರಿಕೆಟ್ ಅಂತಿಮ ಪಂದ್ಯವು ಭಾನುವಾರ ನಡೆಯಿತು.

Advertisement

ನಗರದ ವಿಡಿಎಸ್ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ನಡುವೆ ಅಂತಿಮ ಸ್ಪರ್ಧೆ ನಡೆಯಿತು. ಮೊದಲು ಬ್ಯಾಟ್ ಮಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡದವರು 10 ಓವರಿಗೆ 6 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿ ರೋಚಕ ಜಯಗಳಿಸಿದರು.

ಶಿಕ್ಷಣ ಇಲಾಖೆಯ ತಂಡದವರು 10 ಓವರಿಗೆ 3 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿದರು. ಅಂತಿಮ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಚಾಲನೆ ನೀಡಿದರು. ಜಿ.ಪಂ ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಭರತ್.ಎಸ್ ಅವರು ಪಾರಿತೋಷಕ ಹಾಗೂ ಪ್ರಶಸ್ತಿಪತ್ರ ವಿತರಿಸಿದರು.

ಜಿ.ಪಂ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದಶಕ ಶರಣು ಗೋಗೇರಿ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜಿಕರ ಇತರರು ಇದ್ದರು.


Spread the love

LEAVE A REPLY

Please enter your comment!
Please enter your name here