ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಈ ನಾಡಿನ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿದ ಕೀರ್ತಿ ವೀರರಾಣಿ ಕಿತ್ತೂರು ಚನ್ನಮ್ಮಳಿಗೆ ಸಲ್ಲುತ್ತದೆ, ಅವರ ಕೆಚ್ಚೆದೆಯ ಹೋರಾಟದಿಂದ ಬ್ರಿಟಿಷರನ್ನು ಅಲುಗಾಡಿಸಿದ್ದರು.
ಅಂತಹ ಧೀರ ಮಹಿಳೆಯನ್ನು ಸ್ಮರಿಸುವದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಗ್ರೇಡ್ 2 ತಹಸೀಲ್ದಾರ ಮಂಜುನಾಥ ಅಮಾಸಿ ಅಭಿಪ್ರಾಯಪಟ್ಟರು.
ಅವರು ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಕಿತ್ತೂರರಾಣಿ ಚನ್ನಮ್ಮಳ ವಿಜಯೋತ್ಸವ, ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಚನ್ನಮ್ಮಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ವೀರರಾಣಿ ಕಿತ್ತೂರು ಚನ್ನಮ್ಮ ಕನ್ನಡ ನಾಡಿನ ಹೆಮ್ಮೆ. ಚನ್ನಮ್ಮಳ ದೇಶಪ್ರೇಮ, ಶೌರ್ಯ, ಸಾಹಸ ಇಂದಿನ ಯುವ ಪೀಳಿಗೆಗೆ ಆದರ್ಶವಾಗಬೇಕು ಎಂದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ತಾಲೂಕಾಧ್ಯಕ್ಷ ಮಂಜುನಾಥ ಮಾಗಡಿ, ಚಂಬಣ್ಣ ಬಾಳಿಕಾಯಿ, ರಾಜು ಲಿಂಬಿಕಾಯಿ, ಮಹಾದೇವಪ್ಪ ಅಣ್ಣಿಗೇರಿ, ಈರಣ್ಣ ಕಟಗಿ, ಚಂದ್ರು ಮಾಗಡಿ, ಬಸವರಾಜ ಜಾಲಗಾರ, ಗಂಗಾಧರ ಗೋಡಿ, ಶಿವನಗೌಡ್ರ ಅಡರಕಟ್ಟಿ, ಪವನ ಬಂಕಾಪೂರ, ಪಕ್ಕೀರೇಶ ಅಣ್ಣಿಗೇರಿ, ಶಿವಾನಂದ ಬನ್ನಿಮಟ್ಟಿ, ಮಹಾಂತೇಶ ಉಮಚಗಿ, ಮಲ್ಲಿಕಾರ್ಜುನ ನೀರಾಲೋಟಿ, ತಹಸೀಲ್ದಾರ ಕಚೇರಿ ಸಿಬ್ಬಂದಿಗಳು ಇದ್ದರು.