ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ವಿಡಿಯೋ ದರ್ಶನ್ ಆಪ್ತ ಧನ್ವೀರ್ ರಿಲೀಸ್ ಮಾಡಿರೋ ಅನುಮಾನ ಮೂಡಿದೆ. ಈ ಸಂಬಂಧ ನಟ ದರ್ಶನ್ ಆಪ್ತ ನಟ ಧನ್ವೀರ್ ರನ್ನು ಕೂಡ ಸಿಸಿಬಿ ಟೀಮ್ ವಿಚಾರಣೆ ನಡೆಸಿದೆ.
ಹೌದು ಪರಪ್ಪನ ಅಗ್ರಹಾರ ಜೈಲಿನ ವಿಡಿಯೋಗಳನ್ನು ಧನ್ವೀರ್ ಬಿಡುಗಡೆ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಪೊಲೀಸರು ವಿಚಾರಣೆ ನಡೆಸುತ್ತಿದ್ದು ಧನ್ವೀರ್ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ಆದರೆ ಅವರ ಬಳಿ ಆ ರೀತಿಯ ಯಾವುದೇ ವಿಡಿಯೋ ಪತ್ತೆ ಆಗಿಲ್ಲ. ಹಾಗಾಗಿ ವಿಚಾರಣೆ ನಡೆಸಿ ಅವರನ್ನು ಸಿಸಿಬಿ ಪೊಲೀಸರು ಕಳುಹಿಸಿದ್ದಾರೆ.
ದರ್ಶನ್‌ಗೆ ದಿಂಬು, ಹಾಸಿಗೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ದರ್ಶನ್ ಪರ ವಕೀಲರು ಬೇರೆ ಕೈದಿಗಳಿಗೆ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಆದರೆ ದರ್ಶನ್ ಅವರಿಗೆ ಸವಲತ್ತುಗಳು ಸಿಗುತ್ತಿಲ್ಲ ಎಂದು ವಾದಿಸಿದ್ದರು.



