ಹೈದರಾಬಾದ್: ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಕಾರು ಅಪಘಾತಕ್ಕೀಡಾಗಿರುವ ಘಟನೆ ಗದ್ವಾಲ್ ಜಿಲ್ಲೆ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಜರುಗಿದೆ.
Advertisement
ವಿಜಯ್ ದೇವರಕೊಂಡ ಅವರು ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ಹೈದ್ರಾಬಾದ್ಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ದೇವರಕೊಂಡ ಕಾರು ಸಂಚರಿಸುವಾಗ ಬೊಲೆರೊ ವಾಹನ ಬಂದು ಡಿಕ್ಕಿ ಹೊಡೆದಿದೆ. ಸದ್ಯ ಸ್ಟಾರ್ ನಟ ವಿಜಯ್ ದೇವರಕೊಂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಕಾರಿನ ಒಂದು ಬದಿ ಹಾನಿಯಾಗಿದೆ ಎಂದು ತಿಳಿದು ಬಂದಿದೆ.