HomeIndia Newsವಿದ್ಯಾರ್ಥಿಗಳಿಗೆ ಪ್ರತಿಭಟನೆ ನಿರ್ಬಂಧಿಸಿದ್ದ ಆದೇಶಕ್ಕೆ ವಿಜಯ್‌ ಸರ್ಕಾರ ಯೂಟರ್ನ್‌

ವಿದ್ಯಾರ್ಥಿಗಳಿಗೆ ಪ್ರತಿಭಟನೆ ನಿರ್ಬಂಧಿಸಿದ್ದ ಆದೇಶಕ್ಕೆ ವಿಜಯ್‌ ಸರ್ಕಾರ ಯೂಟರ್ನ್‌

For Dai;y Updates Join Our whatsapp Group

ಚೆನ್ನೈ: ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಯುವಕರು ಎಡಪಂಥೀಯ ಸಂಘಟನೆಗಳು ನಡೆಸುವ ಪ್ರತಿಭಟನೆ ಮತ್ತು ಆಂದೋಲನಗಳಲ್ಲಿ ಭಾಗವಹಿಸುವುದನ್ನು ತಡೆಯುವಂತೆ ನೀಡಿದ್ದ ಹಿಂದಿನ ನಿರ್ದೇಶನವನ್ನು ತಮಿಳುನಾಡು ಸರ್ಕಾರ ಹಿಂಪಡೆದಿದೆ.

ಆಗಸ್ಟ್‌ 17ರಂದು ಕಾಲೇಜು ಶಿಕ್ಷಣ ಇಲಾಖೆಯಿಂದ ನೀಡಲಾಗಿದ್ದ ನಿರ್ದೇಶನವನ್ನು ಇದೀಗ ರದ್ದುಗೊಳಿಸಲಾಗಿದೆ. ಈ ಕುರಿತು ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕಿ ಸಿಂಥಿಯಾ ಸೆಲ್ವಿ ಪಿ. ಅವರು ಆದೇಶ ಹೊರಡಿಸಿದ್ದಾರೆ.

ತಮಿಳುನಾಡಿನಾದ್ಯಂತ ಇರುವ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳ ಪ್ರಾಂಶುಪಾಲರಿಗೆ ಈ ಹಿಂದಿನ ನಿರ್ದೇಶನ ನೀಡಲಾಗಿತ್ತು. ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಆಯೋಜಿಸುವ ಪ್ರತಿಭಟನೆಗಳು ಮತ್ತು ಆಂದೋಲನಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರು ಭಾಗವಹಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.

ಅಲ್ಲದೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾಡಳಿತಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ವಿದ್ಯಾರ್ಥಿಗಳು ಯಾವುದೇ ರಾಜಕೀಯ ಪಕ್ಷಗಳ ಪ್ರತಿಭಟನೆಗಳಲ್ಲಿ ಭಾಗವಹಿಸದಂತೆ ನೋಡಿಕೊಳ್ಳಬೇಕು ಎಂದು ಹಿಂದಿನ ಆದೇಶದಲ್ಲಿ ತಿಳಿಸಲಾಗಿತ್ತು.

ಆದರೆ, ಇದೀಗ ಆಗಸ್ಟ್‌ 17ರಂದು ನೀಡಿದ್ದ ಈ ನಿರ್ದೇಶನವನ್ನು ಸರ್ಕಾರ ಹಿಂಪಡೆದಿದ್ದು, ವಿದ್ಯಾರ್ಥಿಗಳು ಮತ್ತು ಯುವಕರ ಪ್ರತಿಭಟನೆ ಪಾಲ್ಗೊಳ್ಳುವಿಕೆ ಕುರಿತು ಹೊರಡಿಸಿದ್ದ ಹಿಂದಿನ ಸೂಚನೆ ರದ್ದಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img