ಅಸ್ಸಾಂನ ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಭೇಟಿ ಕೊಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ.
Advertisement
ಇನ್ನೂ ಈ ಹಿಂದೆ ದರ್ಶನ್ ಅವರು ರೇಣುಕಾಸ್ವಾಮಿ ಪ್ರಕರಣದಲ್ಲಿ ಅರೆಸ್ಟ್ ಆದ ಸಂದರ್ಭದಲ್ಲಿ ಕಾಮಾಕ್ಯ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ವಿಜಯಲಕ್ಷ್ಮಿ ಅವರು ದೇವಿಯ ಆರಾಧಕಿ. ಆಗಾಗ ಶಕ್ತಿ ದೇವತೆಯ ಮೊರೆ ಹೋಗುತ್ತಾರೆ. ಇದೀಗ ಅಸ್ಸಾಂನ ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದಲ್ಲಿ ಕೆಲ ಕಾಲ ಸಮಯ ಕಳೆದಿದ್ದಾರೆ.