ಬೆಂಗಳೂರು:– ವಿಜಯಲಕ್ಷ್ಮಿ ದರ್ಶನ್ ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸ್ ಠಾಣೆಯ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ದೂರು ದಾಖಲಿಸಿಕೊಂಡು ಕಾರ್ಯಾಚರಣೆಗೆ ಇಳಿದಿದೆ.
ಅಶ್ಲೀಲ ಕಾಮೆಂಟ್ ಮಾಡಿದ ಖಾತೆಗಳ ವಿರುದ್ಧ ಪಿಎಸ್ಐ ಲೋಕೇಶ್ ದೂರು ನೀಡಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಟ್ವಿಟರ್ನಲ್ಲಿ ಅಸಭ್ಯ ಪದ ಬಳಕೆ ನಿಂದನೆ ಮಾಡಲಾಗಿದೆ. ಇದನ್ನು ಗಮನಿಸಿರುವ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ಸೋಶಿಯಲ್ ಮೀಡಿಯಾದ ಮೂರು, ನಾಲ್ಕು ಖಾತೆಗಳ ದೂರು ದಾಖಲಿಸಿಕೊಂಡಿದ್ದಾರೆ.
ಬಿಎನ್ಎಸ್ ಸೆಕ್ಷನ್ 75, 79, ಹಾಗೂ ಐಟಿ ಆ್ಯಕ್ಟ್ 67, 66 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಸಭ್ಯ ಪದಗಳಿಂದ ನಿಂದನೆ ಸಂಬಂಧ ಮಹಿಳಾ ಆಯೋಗಕ್ಕೂ ದೂರು ನೀಡಲಾಗಿದೆ. ದೂರಿನ ಅನ್ವಯ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ ಬರೆದಿದೆ.