ವಿಜಯಪುರ: ರಾಜಗುರು ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಮೂಟೆ ತುಂಬುವ ಯಂತ್ರ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
Advertisement
ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಜಯಪುರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಇಂಡಸ್ಟ್ರೀಸ್‌ನ ಗೋದಾಮಿನಲ್ಲಿ ಈ ದುರಂತ ಸಂಭವಿಸಿದೆ.
ರಾಜೇಶ್ ಮುಖಿಯಾ(25), ರಾಮ್ರೀಜ್ ಮುಖಿಯಾ(29), ಶಂಭು ಮುಖಿಯಾ(26) ಮೃತ ಕಾರ್ಮಿಕರು. ಅವಶೇಷಗಳ ಅಡಿಯಲ್ಲಿ ಇನ್ನೂ 6-7 ಮಂದಿ ಸಿಲುಕಿದ್ದು, ಮೃತಪಟ್ಟಿರುವ ಶಂಕೆಯೂ ವ್ಯಕ್ತವಾಗಿದೆ.
ಎನ್‌ಡಿಆರ್‌ಎಫ್ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ. ಮೃತ ಕಾರ್ಮಿಕರೆಲ್ಲರೂ ಬಿಹಾರ ಮೂಲದವರು ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಆ ಕಾರ್ಮಿಕರು ಇದೇ ಇಂಡಸ್ಟ್ರೀಜ್‍ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.